ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದು ಎಂಬ ಶಂಕೆಯ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ನ.29ರಂದು ಈ ನೋಟಿಸ್ ಕಳಿಸಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು.






