ನ್ಯೂ ಇಯರ್ ದಿನ ಮಧ್ಯರಾತ್ರಿ 2.15ರ ವರೆಗೆ ಮೆಟ್ರೋ ರೈಲು ಸಂಚಾರ

Date:

ಬೆಂಗಳೂರು:- ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಟಿತ ಎಂಜಿ ರೋಡ್ , ಬ್ರಿಗೇಡ್ ರೋಡ್ ಮತ್ತು ಕಮರ್ಶಿಯಲ್ ಸ್ಟ್ರೀಟ್ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಡಿಸೆಂಬರ್ 31ರ ಮಧ್ಯರಾತ್ರಿ ನಗರದಲ್ಲಿ ಜನರ ಓಡಾಟ ಹೆಚ್ಚಿರುವ ಕಾರಣ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಹೊಸ ವರ್ಷದಂದು ಜನ ಸಂಚಾರದ ಅನುಕೂಲಕ್ಕಾಗಿ ನೇರಳೆ ಮತ್ತು ಹಸಿರುವ ಎರಡೂ ಮಾರ್ಗಗಳಲ್ಲಿ ರೈಲು ಸೇವೆಯನ್ನು ವಿಸ್ತರಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಘೋಷಣೆ ಮಾಡಿದೆ.
ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್ ಹೊರತು ಪಡಿಸಿ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಜನವರಿ 1ರಂದು ಬೆಳಗ್ಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ. ಆದರೆ ಮೆಜೆಸ್ಟಿಕ್‌ನಿಂದ ಅಂದು ಬೆಳಗ್ಗೆ 2 ಗಂಟೆಗೆ 15 ನಿಮಿಷಕ್ಕೆ ಕೊನೆಯ ರೈಲು ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. 15 ನಿಮಿಷಕ್ಕೊಮ್ಮೆ ರೈಲು ಸೇವೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆಯಿಂದ ಬಂದಿರುವ ಸಲಹೆ ಮೇರೆಗೆ ಸಾರ್ವಜನಿಕರ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಮಹಾತ್ಮಾ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಡಿಸೆಂಬರ್ 31ರ ರಾತ್ರಿ 11 ಗಂಟೆಗೆ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನವನ್ನು ಮುಚ್ಚಲಾಗುತ್ತದೆ. ಎಂಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಯಾವುದೇ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ. ಆದರೆ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಎಂದಿನಂತೆ ರೈಲು ನಿಲುಗಡೆ ಇರಲಿದೆ.
ಪ್ರಯಾಣಿಕರು ಯಾವುದೇ ಮೆಟ್ರೋ ನಿಲ್ದಾಣದಿಂದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್‌ ಮೆಟ್ರೋ ನಿಲ್ದಾಣಗಳಿಗೆ ಹೊಸ ವರ್ಷಕ್ಕೆ ವಿಸ್ತರಣೆಯಾಗಿರುವ ಸಮಯದಲ್ಲೂ ಪ್ರಯಾಣಕ್ಕೆ ಟೋಕನ್‌ಗಳು, ಸ್ಮಾರ್ಟ್‌ ಕಾರ್ಡ್‌ಗಳು, ಎನ್‌ಸಿಎಂಎಸಿ ಕಾರ್ಡ್‌ಗಳು ಹಾಗೂ ಕ್ಯೂಆರ್ ಟಿಕೆಟ್‌ಗಳನ್ನು ಬಳಸಬಹುದು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...