ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

tnit editors
1 Min Read

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಮರ್ಪಿಸಲಾಯಿತು. ಬಳಿಕ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆಯಾಯಿತು.

ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿತು. ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ವಿಲ್‌ನಲ್ಲಿ ಉಲ್ಲೇಖಿಸಲ್ಪಟ್ಟ ಸಹನಾ ವಿಜಯ್ ಕುಮಾರ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯ ಸಂಸ್ಕಾರದ ಬಳಿಕ ಬಂದೂಕು ಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ತ್ರಿವರ್ಣ ಧ್ವಜವನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಭೈರಪ್ಪ ಅವರ ಪುತ್ರರಿಗೆ ಹಸ್ತಾಂತರ ಮಾಡಿದರು.

Share This Article