2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ನಡೆಸುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ.
ಸುವರ್ಣ ಸೌಧ ಮುತ್ತಿಗೆ ಹಾಕಲು ಹೊರಟ್ಟಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದ ಪರಿಣಾಮ, ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಲಾಠಿ ಚಾರ್ಜ್ ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ತಡೆಹಿಡಿದಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ಹೆದ್ದಾರಿ ಮೇಲೆ ನಿಂತಿವೆ. ಮತ್ತೊಂದೆಡೆ ಜಯ ಮೃತ್ಯುಂಜಯ ಸ್ವಾಮೀಜಿಗಳಿಗೆ ಭದ್ರತೆ ನೀಡಿರುವ ಪೂಲೀಸರು, ಉದ್ರಿಕ್ತರನ್ನು ಸಮಾಧಾನ ಪಡಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ.
ಇಂದು ಮುಂಜಾನೆ ಶಾಂತಿಯುತವಾಗಿ ನಡೆದಿದ್ದ ಪ್ರತಿಭಟನಾ ಸಭೆ ಮುಗಿದ ಬಳಿಕ ಒಂದು ಗುಂಪು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದಾಗ ಈ ಘಟನೆ ನಡೆದಿದೆ.
ಸ್ಥಳದಲ್ಲಿ ಇದೀಗ ಪೋಲಿಸರು ಜಮಾಯಿಸಿದ್ದು, ಕಲ್ಲು ತೂರಾಟ ಹಾಗೂ ಲಾಠಿ ಚಾರ್ಜ್ ನಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.