ಪಂಚಮಸಾಲಿ ಹೋರಾಟದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ: ಐವರ ವಿರುದ್ಧ FIR ದಾಖಲು

Date:

ಪಂಚಮಸಾಲಿ ಹೋರಾಟದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ: ಐವರ ವಿರುದ್ಧ FIR ದಾಖಲು

ಬೆಳಗಾವಿ: ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ.
ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.
ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...