ಪಂಚರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

Date:

ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು.

 

403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದೆ.

 

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.

 

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...