ಪಂತ್ ಗೋಸ್ಕರ ಟೆಸ್ಟ್ ನೋಡಿದ್ದೆ ಎಂದ ಆರ್ಸಿಬಿ ಆಟಗಾರ

Date:

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹಾಗೂ ಈ ಪಂದ್ಯ ಮುಗಿದ ಬೆನ್ನಲ್ಲೇ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಭಾರತ ತಂಡ ಆಡಲಿದೆ. ಹೀಗಾಗಿ ಈ ಎರಡೂ ಸರಣಿಗಳಿಗೂ ಸೇರಿ ಬಿಸಿಸಿಐ 20 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.


ಭಾರತ ಕೈಗೊಳ್ಳಲಿರುವ ಇಂಗ್ಲೆಂಡ್ ಪ್ರವಾಸದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಟೈಮಲ್ ಮಿಲ್ಸ್ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಮಾತನಾಡಿದ್ದಾರೆ.


‘ಗಾಯದ ಸಮಸ್ಯೆಗಳಿರುವುದರಿಂದ ನಾನು ಹೆಚ್ಚಾಗಿ ಟೆಸ್ಟ್ ಪಂದ್ಯಗಳಲ್ಲಿ ಆಡುವುದಿಲ್ಲ, ಸೀಮಿತ ಓವರ್‌ಗಳ ಪಂದ್ಯವನ್ನು ನಾನು ಹೆಚ್ಚಾಗಿ ಇಷ್ಟ ಪಡುತ್ತೇನೆ. ಟೆಸ್ಟ್ ಕ್ರಿಕೆಟ್ ಆಡದ ಕಾರಣ ನಾನು ಟೆಸ್ಟ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುವುದಿಲ್ಲ, ಆದರೆ ರಿಷಭ್ ಪಂತ್ ಆಟ ಬಂತೆಂದರೆ ಸಾಕು ಟಿವಿ ಮುಂದೆ ಕುಳಿತುಬಿಡುತ್ತೇನೆ. ಪಂತ್ ಟೆಸ್ಟ್ ಕ್ರಿಕೆಟ್‍ನಲ್ಲಿಯೂ ಸ್ಪೋಟಕ ಇನ್ನಿಂಗ್ಸ್ ಆಡುತ್ತಾರೆ, ಕಠಿಣವೆನಿಸುವ ಪಿಚ್‌ಗಳಲ್ಲಿಯೂ ಪಂತ್ ಅಬ್ಬರದ ಬ್ಯಾಟಿಂಗ್ ನಡೆಸುವುದನ್ನು ನೋಡುವುದೇ ರೋಮಾಂಚಕಾರಿ’ ಎಂದು ಟೈಮಲ್ ಮಿಲ್ಸ್ ರಿಷಬ್ ಪಂತ್ ಬ್ಯಾಟಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...