ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿರುವ ಆಟಗಾರ ಯಾರು ಗೊತ್ತಾ?

Date:

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳನ್ನು ಮುಂದುವರಿಸುವ ಯೋಜನೆಯಲ್ಲಿದೆ ಬಿಸಿಸಿಐ.

 

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮುಂದೂಡಲ್ಪಟ್ಟ ನಂತರ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ನಿರ್ಮಾಣವಾಗಿರುವ ದಾಖಲೆಗಳು ಮತ್ತು ಮೈಲಿಗಲ್ಲುಗಳ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗೆ ಚರ್ಚಿಸಲ್ಪಡುತ್ತಿರುವ ದಾಖಲೆಗಳ ಪೈಕಿ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ದಾಖಲೆ ಕೂಡ ಒಂದು. ಐಪಿಎಲ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2013ರ ಐಪಿಎಲ್ ಟೂರ್ನಿಯಲ್ಲಿ ಪುಣೆ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ರಿಸ್ ಗೇಲ್ 17 ಸಿಕ್ಸರ್ ಬಾರಿಸಿದ್ದರು. ಈ ದಾಖಲೆ ಇದುವರೆಗೂ ಸಹ ಯಾರಿಂದಲೂ ಮುರಿಯಲ್ಪಟ್ಟಿಲ್ಲ.

 

ಐಪಿಎಲ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿ ಹೀಗಿದೆ : ಕ್ರಿಸ್ ಗೇಲ್ 17 vs ಪುಣೆ ವಾರಿಯರ್ಸ್ ( 2013 ), ಕ್ರಿಸ್ ಗೇಲ್ 13 vs ಡೆಲ್ಲಿ ಕ್ಯಾಪಿಟಲ್ಸ್ ( 2012 ), ಬ್ರೆಂಡನ್ ಮೆಕಲಮ್ 13 vs ರಾಯಲ್ ಚಾಲೆಂಜರ್ಸ್ ಬೆಂಗಳೂರು (2008), ಕ್ರಿಸ್ ಗೇಲ್ 12 vs ಪಂಜಾಬ್ ( 2015 ) ಮತ್ತು ಎಬಿ ಡಿವಿಲಿಯರ್ಸ್ 12 vs ಗುಜರಾತ್‌‌ ಲಯನ್ಸ್ ( 2016).

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...