ಪಕ್ಷದಲ್ಲಿ ಎಲ್ಲಿಯೂ ಯಾವುದೇ ಅಸಮಾಧಾನವಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ಪಕ್ಷದಲ್ಲಿ ಎಲ್ಲಿಯೂ ಯಾವುದೇ ಅಸಮಾಧಾನವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ.
ಪಕ್ಷದಲ್ಲಿ ಎಲ್ಲಿಯೂ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗು ಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದರು.
ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು” ಎಂದು ಹೇಳಿದರು.