ಯಡಿಯೂರಪ್ಪನವರನ್ನು ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿತ್ತು. ಅವರನ್ನು ಎಂತಹ ಸಂದರ್ಭದಲ್ಲೂ ಪಕ್ಷ ಅವರನ್ನು ಕಡೆಗಣಿಸುವುದಿಲ್ಲ. ಅವರ ಸಲಹೆಸೂಚನೆಗಳನ್ನು ಎಲ್ಲರೂ ಪಾಲಿಸುತ್ತೇವೆ ಎಂದು ತಿಳಿಸಿದರು. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.
ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸಿದ ಪ್ರಮುಖರು. ಬಿಜೆಪಿ ಅವರಿಗೆ ಸೂಕ್ತವಾದ ಸ್ಥಾನಮಾನ ನೀಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗಾಳಿ ಸುದ್ದಿಯಷ್ಟೇ ಎಂದು ಸ್ಪಷ್ಟಪಡಿಸಿದರು. ಬಿಜೆಪಿಗೆ ಬಂದಿರುವವರಿಗೆ ಸೂಕ್ತ ಸ್ಥಾನಮಾನವನ್ನು ನೀಡಲಾಗುವುದು. ಯಾರಿಗೆ ಏನು ನೀಡಬೇಕೋ ಎಂಬುದನ್ನು ಪಕ್ಷದ ಚೌಕಟ್ಟಿನಲ್ಲಿ ತೀರ್ಮಾನ ಮಾಡುತ್ತೆವೆ. ನಮ್ಮ ಪಕ್ಷಕ್ಕೆ ಬಂದವರಿಗೆ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ನಳಿನ್ ಕುಮಾರ್ ಕಟಿಲ್ ಅವರು ಹೇಳಿದರು.