ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ. ದೂರು ಕೊಡೋದು ರಾಜಣ್ಣ ಅವರಿಗೆ ಬಿಟ್ಟ ವಿಚಾರ: ಎಂ.ಬಿ ಪಾಟೀಲ್
ವಿಜಯಪುರ: ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ. ದೂರು ಕೊಡೋದು ರಾಜಣ್ಣ ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಹನಿಟ್ರ್ಯಾಪ್ ವಿಚಾರದಲ್ಲಿ ಸಚಿವ ರಾಜಣ್ಣ ದೂರು ಯಾಕೆ ಕೊಟ್ಟಿಲ್ಲ ಎನ್ನುವ ವಿಚಾರ ಕುರಿತು ಮಾತನಾಡಿದ ಅವರು,
ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ. ದೂರು ಕೊಡೋದು ಅವರಿಗೆ ಬಿಟ್ಟ ವಿಚಾರ. ಯಾಕೆ ಏನು ಅನ್ನೋದನ್ನ ರಾಜಣ್ಣರಿಗೆ ಕೇಳಬೇಕು ಅಂತ ಹೇಳಿದ್ದಾರೆ.
ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ. ರಾಜ್ಯಾಧ್ಯಕ್ಷ ಬದಲಾವಣೆಯನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ನಾವು ಮಾತನಾಡೋದ್ರಲ್ಲಿ ಅರ್ಥ ಇಲ್ಲ ಅಂತ ತಿಳಿಸಿದ್ದಾರೆ.