ಬೆಂಗಳೂರು: 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಅಂದರೆ ತಮಾಷೆ ಅನ್ನಿಸಬಹುದು. ಆದರೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರ ಅಲೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಅಂದರೆ ತಮಾಷೆ ಅನ್ನಿಸಬಹುದು. ಆದರೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರ ಅಲೆ ಇದೆ.
ಮೋದಿ ನಾಯಕತ್ವ, ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರು ಹೊರಗಿನವರು, ಯಾರು ಪಕ್ಷದ ಒಳಗಿನವರು ಎಂಬ ಪ್ರಶ್ನೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಬೇಕೆಂದು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಅಲ್ಲದೆ, ಆಪರೇಷನ್ ಕಮಲ ಆರಂಭವಾಗಿದೆ ಎನ್ನಲಾಗುತ್ತಿದೆ.
ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ !
Date: