ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ: ಎಂ.ಪಿ ರೇಣುಕಾಚಾರ್ಯ

Date:

ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ: ಎಂ.ಪಿ ರೇಣುಕಾಚಾರ್ಯ

 

 

ಬೆಂಗಳೂರು: ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು.

ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ? ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ. ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ ಎಂದರು.

ಇನ್ನೂ ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ, ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಪ್ಲಾಂಟ್ ಮಾಡಿಸ್ತಿದ್ದಾರೆ. ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ ಬಂಧನ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ...