ಪಟಾಕಿ ಅಂಗಡಿಗೆ ಬೆಂಕಿ ದುರಂತ ಪ್ರಕರಣ: ಮೃತರ ಸಂಖ್ಯೆ 14ಕ್ಕೆ ಏರಿಕೆ

0
414

ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ,
ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304 ಅಡಿ ಎಫ್ಐಆರ್ ದಾಖಲಾಗಿದೆ.ಐಪಿಸಿ ಸೆಕ್ಷನ್ 337 – ಇತರರ ಜೀವ ಮತ್ತು ಸುರಕ್ಷತೆಗೆ ಧಕ್ಕೆ, ಐಪಿಸಿ ಸೆಕ್ಷನ್ 338 – ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಧಕ್ಕೆ ಮಾಡುವುದು. 304- ಅಪರಾಧಿ ನರಹತ್ಯೆ (ಕೊಲೆಗೆ ಸಮಾನವಲ್ಲ) 9 (ಬಿ) ಸ್ಪೋಟಕ ವಸ್ತು ಅಡಿ ಪ್ರಕರಣ ದಾಖಲಾಗಿದೆ.