ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.
ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.