No menu items!
21 C
Munich
Sunday, May 3, 2026

ಪತಿಯ ಕಿರುಕುಳದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ಪತ್ನಿ..!

Must read

ಪತಿಯ ಕಿರುಕುಳದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ಪತ್ನಿ..!

ಬೆಳಗಾವಿ: ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತ ದುರ್ದೈವಿಗಳಾಗಿದ್ದು,
ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸಗೆ ಸ್ಪಂದಿಸದೆ ಆಕೆಯೂ ಸಾವಿಗೀಡಾಗಿದ್ದಾಳೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪತಿ ಅಶೋಕ್ ಕಿರುಕುಳದಿಂದ ಬೇಸತ್ತು ಶಾರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತಿ ಅಶೋಕ್ ನಿತ್ಯ ಮದ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸದ್ಯ ಪತಿ ಅಶೋಕ್ನನ್ನು ಡಾಲೆ ವಶಕ್ಕೆ ಪಡೆದಿದ್ದಾರೆ.

- Advertisement -spot_img

More articles

- Advertisement -spot_img

Latest article