ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು..!

Date:

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮಿತ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡಿರೋ ಜಿಮ್ ಟ್ರೈನರ್ ಆಗಿದ್ದು, ಬಿಹಾರ ಮೂಲದ ಅಮಿತ್ ಕುಮಾರ್  ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಹಾಸನ ಮೂಲದ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ ಬಳಿಕ ಪತಿಗೆ ಸಮಯ ನೀಡುತ್ತಿರಲಿಲ್ಲ ಎನ್ನಲಾಗುತ್ತಿದ್ದು, ಫ್ರೆಂಡ್ಸ್‌ ಜೊತೆ ಪದೇ ಪದೇ ಫೋನ್ ಕಾಲ್​ನಲ್ಲಿರುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.

ಹೀಗಾಗಿ ಪತಿ ತೊರೆದ ಪತ್ನಿ ಬೇರೆಡೆ ವಾಸವಿದ್ದರು. ಮನೆಗೆ ಪತ್ನಿ ವಾಪಾಸ್ ಬರುವಂತೆ ಪತಿ ಅಮಿತ್ ಪದೇ ಪದೇ ಕರೆ ಮಾಡಿ ಮನವಿ ಮಾಡುತ್ತಿದ್ದ. ನಿನ್ನೆ ಕೂಡ ವಿಡಿಯೋ ಕಾಲ್​ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಬಾಗಲಗುಂಟೆಯ ಪತಿ ಮನೆಯಲ್ಲಿ ನೇಣು ಬಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ವಿಕ್ಟೋರಿಯಾದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...