ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ: ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ.!

Date:

ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ: ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ.!

ಹುಬ್ಬಳ್ಳಿ: 34 ವರ್ಷದ AI ಇಂಜಿನಿಯರ್ ಅತುಲ್ ಸುಭಾಷ್ ಅವರ ದುರಂತ ಸಾವು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿತ್ತು. ಇದೀಗ ಮತ್ತೊಬ್ಬ ವ್ಯಕ್ತಿ ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಪೀಟರ್, `ಡ್ಯಾಡಿ ಆಯಮ್ ಸಾರಿ, ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈ ಡೆತ್ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಶವ ಪೆಟ್ಟಿಗೆ ಮೇಲೆ `ಹೆಂಡತಿ ಟಾರ್ಚರ್‍ನಿಂದ ಸಾವು’ ಎಂದು ಬರೆಸುವಂತೆ ಡೆತ್ ನೋಟ್ ಉಲ್ಲೇಖಿಸಲಾಗಿದೆ. ಪೀಟರ್ ಆಸೆಯಂತೆ ಶವ ಪೆಟ್ಟಿಗೆ ಮೇಲೆ `ಮೈ ಡೆತ್ ಬಿಕಾಸ್ ಆಫ್ ಮೈ ವೈಫ್ ಟಾರ್ಚರ್’ ಎಂದು ಕುಟುಂಬಸ್ಥರು ಬರೆಸಿಕೊಂಡಿದ್ದಾರೆ.
ಪೀಟರ್ ಪತ್ನಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದರು. ಇತ್ತೀಚಿಗೆ ಬೇರೆ ವ್ಯಕ್ತಿ ಜೊತೆಗೆ ಸುತ್ತಾಟ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ, ನನ್ನ ಜೀವನ ನನ್ನಿಷ್ಟ ಎಂದು ಉತ್ತರ ನೀಡಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಹಲವಾರು ತಿಂಗಳು ಪತಿಯಿಂದ ದೂರವಿದ್ದ ಮಹಿಳೆ, ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಳು. ಇಂದು ಈ ಬಗ್ಗೆ ಕೋರ್ಟ್‍ನಲ್ಲಿ ವಿಚಾರಣೆ ಇತ್ತು. ಆಕೆ ವಕೀಲರ ಮೂಲಕ 20 ಲಕ್ಷ ರೂ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...