ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ಸ್ ನಲ್ಲಿ ಭಾರತ ಪುರುಷರ ಹಾಕಿ ತಂಡ ಸೆಮಿಫೈನಲ್ ಪ್ರವೇಶವನ್ನು ಮಾಡಿತ್ತು. ಹೌದು ಭಾರತ ಪುರುಷರ ಹಾಕಿ ತಂಡ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್ ಪ್ರವೇಶವನ್ನು ಮಾಡಿ ಚಿನ್ನದ ಪದಕವನ್ನು ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಆದರೆ ಸೆಮಿಫೈನಲ್ ಹಂತದಲ್ಲಿ ಬೆಲ್ಜಿಯಂ ವಿರುದ್ಧ 2-5 ಗೋಲುಗಳ ಅಂತರದಲ್ಲಿ ಸೋಲಿಸುವುದರ ಮೂಲಕ ಚಿನ್ನದ ಪದಕ ಗೆಲ್ಲುವ ರೇಸ್ ನಿಂದ ಭಾರತ ಪುರುಷರ ಹಾಕಿ ತಂಡ ಹೊರಬಿದ್ದಿದೆ.
ಸೆಮಿಫೈನಲ್ ನಲ್ಲಿ ಸೋತು ನಿರಾಸೆ ಉಂಟು ಮಾಡಿರುವ ಭಾರತ ಪುರುಷರ ಹಾಕಿ ತಂಡಕ್ಕೆ ಕಂಚಿನ ಪದಕ ಗೆಲ್ಲುವ ಅವಕಾಶ ಇನ್ನೂ ಜೀವಂತವಾಗಿದೆ. ಸೆಮಿಫೈನಲ್ ಸೋತ ತಂಡಗಳೆರಡು ಕಂಚಿನ ಪದಕಕ್ಕಾಗಿ ಸೆಣಸಾಡಲಿದ್ದು ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಕಂಚಿನ ಪದಕ ಲಭಿಸಲಿದೆ. ಇತ್ತ ಪುರುಷರ ಹಾಕಿ ತಂಡ ಸೆಮಿಫೈನಲ್ ಹಂತದಲ್ಲಿ ಸೋತಿದ್ದು ಅತ್ತ ಮಹಿಳೆಯರ ಹಾಕಿ ತಂಡ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಮಣ್ಣುಮುಕ್ಕಿಸಿ ಸೆಮಿಫೈನಲ್ ಹಂತವನ್ನು ತಲುಪಿದೆ. ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಭಾರತ ಮಹಿಳಾ ತಂಡ ಸೆಮಿಫೈನಲ್ ಪ್ರವೇಶವನ್ನು ಮಾಡಿದ್ದು ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕು.