ತುಮಕೂರಿನಲ್ಲಿರುವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗೆ ಸೇರಿದ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದ ಮೆಡಿಕಲ್ ಕಾಲೇಜು ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಐಟಿ ದಾಳಿ ಸಹಜ ಪ್ರಕ್ರಿಯೆ. ನಾವು ಏನಾದರೂ ತಪ್ಪು ಮಾಡಿದರೆ ಅವರ ಸಲಹೆಯನ್ನು ಸ್ವೀಕರಿಸುತ್ತೇವೆ. ತಪ್ಪುಗಳಿದ್ದರೆ ಐಟಿ ದಾಳಿ ಮಾಡಲಿ ಎಂದು ಹೇಳಿದ್ದಾರೆ.