ಕಾಶ್ಮೀರದ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುತ್ತಿರುವ ಅಮೆರಿಕಕ್ಕೆ ಮುಟ್ಟಿನೋಡುಕೊಳ್ಳುವಂತಹ ಪ್ರತಿಕ್ರಿಯೆಯನ್ನು ಭಾರತ ನೀಡಿದೆ.
ಮೋದಿ ಬಯಸುವುದಾದರೆ ನಾವು ಮಧ್ಯಪ್ರವೇಶಿಸಿ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಡುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತ… “ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಿಗೆ ಸಂಬಂಧಿಸಿದ ದ್ವಿಪಕ್ಷೀಯ ವಿಷಯ, ಅದನ್ನು ನಾವು ದ್ವಿಪಕ್ಷೀಯವಾಗಿಯೇ ಸರಿಪಡಿಸಿಕೊಳ್ಳುತ್ತೇವೆ.
ಆದ್ದರಿಂದ ಕಾಶ್ಮೀರದ ಕುರಿತು ಭಾರತದ ಮಾತುಕತೆಯೇನಿದ್ದರೂ ಅದು ಪಾಕಿಸ್ತಾನದ ಜೊತೆ ಮಾತ್ರ” ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಮೇರಿಕಾಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಶ್ಮೀರದ ವಿಚಾರದಲ್ಲಿ ಕಳೆದ ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಅಮೆರಿಕ ಮಧ್ಯಸ್ಥಿಕೆ ವಹಿಸುವ ಇರಾದೆ ವ್ಯಕ್ತಪಡಿಸಿರುವುದನ್ನು ನಾವಿಲ್ಲಿ ಸ್ಮರಿಸಬಹುದು.