ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದ್ರು ತಪ್ಪು ಹಾಗೂ ದೇಶದ್ರೋಹದ ಕೆಲಸ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದ್ರು ತಪ್ಪು ಹಾಗೂ ದೇಶದ್ರೋಹದ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ ಅದು ದೇಶದ್ರೋಹ. ಮಂಗಳೂರಿನ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ, 18 ಜನರ ಅರೆಸ್ಟ್ ಆಗಿದೆ’ ಎಂದು ತಿಳಿಸಿದರು.
ಮಂಗಳೂರಿನ ಕುಡುಪು ಎಂಬಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮೊಹಮ್ಮದ್ ಅಶ್ರಫ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಆತ ನಂತರ ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿ 20 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿ ಕೇರಳ ಮೂಲದವನಾಗಿದ್ದು, ಕ್ರಿಕೆಟ್ ಪಂದ್ಯದ ವೇಳೆ ‘‘ಪಾಕಿಸ್ತಾನ ಜಿಂದಾಬಾದ್’’ ಎಂದು ಘೋಷಣೆ ಕೂಗಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.