ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆಯಿಂದ: ಶಿವರಾಜ್ ತಂಗಡಗಿ

Date:

ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆಯಿಂದ: ಶಿವರಾಜ್ ತಂಗಡಗಿ

ಬೆಂಗಳೂರು:- ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆಯಿಂದ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಏನೋಗಿದೆಯೋ ಗೊತ್ತಿಲ್ಲ. ಬಿಜೆಪಿಯವರಿಗೆ ಜಾತಿ, ಮಸೀದಿ ಕಂಡರೆ ಪ್ರೀತಿ, ಮುಸ್ಲಿಂ ಕಂಡರೆ ಇನ್ನೂ ಜಾಸ್ತಿ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ. ಜಾತಿ ವಿಚಾರದಲ್ಲಿನಾವು ಹೇಳಿದ್ದು ಫೈನಲ್ ಅಲ್ಲ. ಆಯೋಗ ಮೊದಲು ವರದಿ ಕೊಡಲಿ. ಸರ್ಕಾರ ಸಂಪುಟದಲ್ಲಿ ತೀರ್ಮಾನ ಮಾಡುತ್ತದೆ. ಜನರು ಏನು ಬೇಕಾದರೂ ಬರೆಸಲಿ. ಎಲ್ಲಾ ಸಮಾಜದವರು ಸಭೆ ಮಾಡುತ್ತಿದ್ದಾರೆ. ಎಲ್ಲರೂ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಫೈನಲ್ ಆಗಿ ಜನರು ಏನು ಬರೆಸಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು

ಆಯೋಗ ಸ್ವತಂತ್ರ ಸಂಸ್ಥೆ, ಅದರ ಮೇಲೆ ಒತ್ತಡ ಹೇರಲು ಆಗಲ್ಲ. ಯಾರೂ ಮಧ್ಯಪ್ರವೇಶ ಮಾಡಬಾರದು ಎಂದು ಸಿಎಂ ಹೇಳಿದ್ದಾರೆ. ಬಿಜೆಪಿಯವರಿಗೆ ಕೆಲಸ ಏನಿದೆ? ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿ. ಗ್ಯಾರಂಟಿ ಬಡಜನರಿಗೆ ತಲುಪುತ್ತಿಲ್ಲ ಅಂದರೆ ಹೇಳಲಿ. ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗೆ ಇಲ್ಲ. ಇಲ್ಲಿ ಮಸೀದಿ, ಧರ್ಮದ ಬಗ್ಗೆ ಮಾತನಾಡುತ್ತಾರೆ. ಜಾತಿಗಳ ಬಗ್ಗೆ ನಾವು ಚರ್ಚೆ ಮಾಡಬಾರದು. ಜಾತಿ ಬಗ್ಗೆ ಚರ್ಚೆ ಮಾಡಿದರೆ ದೇಶ ಅವನತಿಯತ್ತ ಸಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆ ಮಾಡಿ ಎಂದು ಕಿಡಿಕಾರಿದರು.

ನಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿ ಅಲ್ಲ. ಶೈಕಣಿಕ, ಆರ್ಥಿಕ ಸಮೀಕ್ಷೆಯನ್ನು ನಾವು ಮಾಡುತ್ತಿದ್ದೇವೆ. ನಮಗೆ ಜಾತಿಗಣತಿ ಮಾಡುವ ಪವರ್ ಇಲ್ಲ. ಕೇಂದ್ರ ಸರ್ಕಾರಕ್ಕೆ ಜಾತಿಗಣತಿ ಮಾಡುವ ಪವರ್ ಇದೆ. ನಾವು ಸ್ಪಷ್ಟವಾಗಿ ಆದೇಶ ಹೊರಡಿಸಿದ್ದೇವೆ. ಸೆ.22ರಿಂದ ಅಕ್ಟೋಬರ್ 7ರವರೆಗೆ ಸಮೀಕ್ಷೆ ನಡೆಯಲಿದೆ. ಮನೆಮನೆಗೆ ಹೋಗಿ ಸಮೀಕ್ಷೆ ಮಾಡುತ್ತಾರೆ. ದಯಮಾಡಿ ಬಂದವರಿಗೆ ಎಲ್ಲಾ ಮಾಹಿತಿ ನೀಡಿ. 60 ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರವನ್ನು ನೀಡಿ. ಯಾರ ಒತ್ತಡಕ್ಕೂ ಒಳಗಾಗದೆ ಉತ್ತರವನ್ನು ನೀಡಿ ಎಂದು ಹೇಳಿದರು

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...