No menu items!
17.9 C
Munich
Monday, June 22, 2026

ಪಾಕ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ: 7 ಮಂದಿಯ ವಿಚಾರಣೆ

Must read

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು 7 ಮಂದಿಯ ವಿಚಾರಣೆ ನಡೆಸಿದ್ದಾರೆ. ಈ ಏಳು ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ಪೊಲೀಸರು ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಗೆ ರವಾನೆ ಮಾಡಿದ್ದಾರೆ. ಇನ್ನು ಧ್ವನಿ ಮಾದರಿ ಜೊತೆಗೆ ವಿಡಿಯೋ ತುಣಕನ್ನು ಕಳುಹಿಸಿದ್ದಾರೆ.
ಪೊಲೀಸರು ಎಲ್ಲ ಮಾಧ್ಯಮಗಳಿಂದ ವಿಡಿಯೋ ತುಣಕುಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಡಿಯೋಗಳಲ್ಲಿ ಕೇವಲ ಒಂದು ವಿಡಿಯೋ ತುಣುಕನ್ನು ಮಾತ್ರ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ಮೇಲೆ ವಿಧಾನಸೌಧ ಪೊಲೀಸರು 26 ಜನರ ಪಟ್ಟಿ ತಯಾರಿಸಿದ್ದು, ಇನ್ನೂ 19 ಜನರ ವಿಚಾರಣೆ ಬಾಕಿ ಇದೆ ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ವಿಜಯೋತ್ಸವದ ವೇಳೆ ಪಕ್ಕದಲ್ಲಿ ಇದ್ದ ಬೆಂಬಲಿಗ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಹೀಗಾಗಿ ಬುಧವಾರ ಬ್ಯಾಡಗಿಗೆ ತೆರಳಿದ್ದ ಪೊಲೀಸರ ತಂಡ, ಮೊಹಮ್ಮೆದ್ ಶಫಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈತನ ಧ್ವನಿ ಮಾದರಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article