ಪಾಕ್ ಮೇಲೆ ‘ಆಪರೇಷನ್ ಸಿಂಧೂರ್’ ಆರಂಭ: ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರ ದಾಳಿ
ನವದೆಹಲಿ: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ.
ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು.
ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ.
ಇದೀಗ ಎಡಿಜಿಪಿಐ ಇಂಡಿಯನ್ ಆರ್ಮಿ (ನ್ಯಾಯ ಒದಗಿಸಿದೆ) ಎಂದು ಪೋಸ್ಟ್ ಹಾಕಿದೆ. ಪಹಲ್ಗಾಮ್ ಉಗ್ರರ ದಾಳಿಗೆ ನ್ಯಾಯ ಒದಗಿಸಲಾಗಿದೆ. ಜೈ ಹಿಂದ್ ಎಂದು ಭಾರತೀಯ ಸೇನೆ ತನ್ನ ಎಕ್ಸ್ನಲ್ಲಿ ಪೋಸ್ಟ್ ಹಾಕಿ ಪತ್ರೀಕಾರದ ಸಂದೇಶವನ್ನು ನೀಡಿದೆ.
ಉಗ್ರರ 9 ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಳಗಡೆ ನುಗ್ಗಿ ಏರ್ಸ್ಟ್ರೈಕ್ ಮಾಡಿ ಧ್ವಂಸ ಮಾಡಿದೆ. ಭಾರತ ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದು ವಿಶೇಷ.
9 ಉಗ್ರರ ನೆಲೆಗಳ ಪೈಕಿ ಕೆಲವು 100 ಕಿ.ಮೀ ದೂರದಲ್ಲಿ ಇದ್ದವು. ದಾಳಿಗೊಳಗಾದ ಶಿಬಿರಗಳು ಭಾರತದ ವಿರುದ್ಧದ ಹಿಂದಿನ ಅನೇಕ ದಾಳಿಗಳಿಗೆ ನೇರವಾಗಿ ಸಂಬಂಧಿಸಿವೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.