2019 ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ 89 ರನ್ ಗಳ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಈಗ ಜಾಲಿ ಮೂಡ್ ನಲ್ಲಿದ್ದು ಆಟಗಾರರು ಹೊಸ ಹೇರ್ ಸ್ಟೈಲ್ ಮಾಡಿಸಿಕೊಳ್ಳುವುದರ ಮೂಲಕ ಮಿಂಚುತ್ತಿದ್ದಾರೆ.
ಬದ್ಧ ವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಐದು ದಿನಗಳ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಿರುವ ಟೀಂ ಇಂಡಿಯಾ ಆಟಗಾರರು ಶನಿವಾರ ಅಫ್ಘಾನಿಸ್ತಾನದ ವಿರುದ್ಧ ಪಂದ್ಯಕ್ಕೂ ಮುನ್ನ ಬಗೆ ಬಗೆಯ ಹೇರ್ ಸ್ಟೈಲ್ ಮಾಡಿಸಿಕೊಳ್ಳುತ್ತಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್ ಧೋನಿ, ಹಾರ್ದಿಕ್ ಪಾಂಡ್ಯ ಮತ್ತು ಯುಜ್ವೇಂದ್ರ ಚಾಹಲ್ ಅವರು ತಮ್ಮ ಕೇಶವಿನ್ಯಾಸವನ್ನು ಬದಲಿಸಿದ್ದಾರೆ, ಇವರ ಹೇರ್ ಸ್ಟೈಲ್ ಮಾಡಿರುವ ಪ್ರಸಿದ್ಧ ಕೇಶವಿನ್ಯಾಸಗಾರ ಅಲಿಂ ಹಕೀಂ ಟೀಂ ಇಂಡಿಯಾ ಆಟಗಾರರ ಫೋಟೊವನ್ನು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಹಂಚಿಕೊಂಡಿದ್ದು ಈ ಹೊಸ ಹೇರ್ ಸ್ಟೈಲ್ ಗೆ ಅಭಿಮಾನಿಗಳು ಮನಸೋತಿದ್ದಾರೆ.