ಪಾದಚಾರಿ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ಪಾದಚಾರಿ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಯರಪಾಳ್ಯ ಬಳಿ ನಡೆದಿದೆ. ಮಹಿಳೆ ಮೃತದೇಹವನ್ನು ಡಾಬಸ್ ಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಪಘಾತ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವಾಹನದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.