No menu items!
12.4 C
Munich
Wednesday, September 2, 2026

ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ: ರಾಹುಲ್ ಗಾಂಧಿ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿ

Must read

ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ: ರಾಹುಲ್ ಗಾಂಧಿ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ,
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ಮಾಡಿದ್ದಾರೆ.
ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

- Advertisement -spot_img

More articles

- Advertisement -spot_img

Latest article