ಪಿಎಸ್​ಐ ಅನುಮಾನಸ್ಪದವಾಗಿ ಸಾವು: ಸ್ಥಳೀಯ ಶಾಸಕರ ಹೆಸರು ತುಳುಕು !

Date:

ಯಾದಗಿರಿ:- ಯಾದಗಿರಿ ನಗರ ಠಾಣೆಯ ಪಿಎಸ್​ಐ ಸಾವು ಪ್ರಕರಣ ಸಾಕಷ್ಟು ಅನುಮಾನ ಹುಟ್ಟು ಹಾಕಿದ್ದು, ಸ್ಥಳೀಯ ಶಾಸಕರ ಹೆಸರು ತುಳುಕು ಹಾಕಿಕೊಳ್ಳುತ್ತಿದೆ.

ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್​​ಗಾಗಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್​ ಅವರನ್ನು ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಗೀತಾ ಅವರ ಬಳಿ ದೂರು ನೀಡಿದ್ದಾರೆ.

ಯಾದಗಿರಿ ಕಾಂಗ್ರೆಸ್​​ ಶಾಸಕ ಚೆನ್ನಾರೆಡ್ಡಿಗೆ ದುಡ್ಡಿನ ಆಸೆ ಹೆಚ್ಚಾಗಿದೆ. ಯಾದಗಿರಿ ಠಾಣೆಯಿಂದ ಅವಧಿ ಪೂರ್ವ ವರ್ಗಾವಣೆ ಮಾಡಿದ್ದಾರೆ. ಅವಧಿ ಪೂರ್ವ ವರ್ಗಾವಣೆಯಿಂದ ಪಿಎಸ್​ಐ ಪರಶುರಾಮ ನೊಂದಿದ್ದರು. ಏಳು ತಿಂಗಳ ಅವಧಿಯಲ್ಲಿ ಶಾಸಕರು ಬೇರೆಯವರಿಗೆ ಪೋಸ್ಟಿಂಗ್ ನೀಡಿದ್ದಾರೆ. ವರ್ಗಾವಣೆ ಮಾಡುತ್ತಿರುವುದು ಸಿಎಂ, ಗೃಹಸಚಿವರ ಗಮನಕ್ಕೆ ಬರಲಿಲ್ವಾ? ಎಂದು ಮೃತ ಪಿಎಸ್​ಐ ಪರಶುರಾಮ ಮಾವ ವೆಂಕಟಸ್ವಾಮಿ ಗಂಭೀರ ಆರೋಪ ಮಾಡಿದರು

ತಪ್ಪಿತಸ್ಥ ಎಂಎಲ್​ಎ ಚನ್ನಾರೆಡ್ಡಿ ಪಾಟೀಲ್​ರನ್ನು ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್​ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದರು

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...