ಪುಟ್ಟಮಗುವಿನ ಬಾಳಿಗೆ ಬೆಳಕಾದ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!
ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ‘ಕೆಡಿ’ ಸಿನಿಮಾ ಬಿಡುಗಡೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೆ ಕೆಡಿ’ ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇದರ ನಡುವೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪುಟ್ಟಮಗುವಿನ ಬಾಳಿಗೆ ಬೆಳಕಾಗಿದ್ದಾರೆ. ಹೌದು ಕಣ್ಣಿನ ಸಮಸ್ಯೆಯಿದ್ದ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.
ಆ ಮೂಲಕ ಆ ಬಾಲಕನ ಕಣ್ಣು ದೃಷ್ಟಿ ಸರಿ ಹೋಗುವಂತೆ ಮಾಡಿದ್ದಲ್ಲದೆ, ಆ ಬಾಲಕನ ಹಾಗೂ ಅವರ ಕುಟುಂಬಕ್ಕೆ ಬೆಳಕಾಗಿದ್ದಾರೆ. ತಾವೇ ಮುಂದೆ ನಿಂತು ಮಂಜುನಾಥ ದೃಷ್ಟಿ ಆಸ್ಪತ್ರೆಯಲ್ಲಿ ಆ ಪುಟ್ಟ ಬಾಲಕನಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಆ ಬಾಲಕನ ದೃಷ್ಟಿದೋಷ ನಿವಾರಣೆ ಆಗಿದೆ.
ಬಾಲಕನ ತಂದೆ ವಿಡಿಯೋನಲ್ಲಿ ಈ ಬಗ್ಗೆ ವಿವರಣೆ ನೀಡಿದ್ದು, ‘ನನ್ನ ಪುಟ್ಟ ಮಗನಿಗೆ ಕಣ್ಣಿನ ಸಮಸ್ಯೆ ಇತ್ತು. ಅದನ್ನು ಧ್ರುವ ಸರ್ಜಾ ಅಣ್ಣನ ಬಳಿ ಹೇಳಿಕೊಂಡೆವು. ಕೂಡಲೇ ಅವರು ಆಸ್ಪತ್ರೆಗೆ ಹೇಳಿದರು. ಅವರಿಂದ ಮಗನ ಕಣ್ಣು ದೃಷ್ಟಿ ಸರಿಹೋಗಿದೆ. ಅವನು ಪ್ರಪಂಚ ನೋಡುವಂತಾಗಿದೆ’ ಎಂದಿದ್ದಾರೆ.