ಪುಣೆ ಮ್ಯಾಚ್ ಸ್ಥಳಾಂತರವಾಗುತ್ತಾ?

Date:

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಪುಣೆಯಲ್ಲಿ ಆಯೋಜಿಸಲು ನಿಗದಿಗೊಳಿಸಲಾಗಿತ್ತು. ಆದರೆ ಈಗ ಅದು ಸ್ಥಳಾಂತರವಾಗುವ ಸಾಧ್ಯತೆಗಳು ಕಂಡು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಬೆಳವಣಿಗೆಗಳು ನಡೆಯುತ್ತಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಎದ್ದಿರುವುದು ದೃಢವಾಗಿದೆ. ಗುರುವಾರ ಒಂದೇ ದಿನ 8000ಕ್ಕೂ ಅಧಿಕ ಕೊರೊನಾ ವೈರಸ್ ಪ್ರಕರಣ ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಮುಂಬೈ ಒಂದರಲ್ಲೇ ಈ ದಿನ 1100ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ.

ಈ ಬೆಳವಣಿಗೆ ಈಗ ಆತಂಕಕ್ಕೆ ಕಾರಣವಾಗಿದೆ.  ಭಾರತ ಹಾಗೂ ಇಂಗ್ಲೆಂಡ್ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತ್ಯವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಐದು ಪಂದ್ಯಗಳು ಕೂಡ ಅಹ್ಮದಾಬಾದ್ನ ನೂತನ ನರೇಂದ್ರ ಮೋದಿ ಸ್ಟೇಡಿಯಂನ್ಲಲಿ ನಡೆಯಲಿದೆ. ಅದಾದ ಬಳಿಕ ಮಾರ್ಚ್ 23 ರಿಂದ 28ರ ಅವಧಿಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದು ಪುಣೆಯಲ್ಲಿ ನಡೆಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು.

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಬಯೋಬಬಲ್‌ಲ್ಲಿದ್ದು ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿತ್ತು. ಅದಾದ ಬಳಿಕ ಅಹ್ಮದಾಬಾದ್‌ನ ನೂತನ ಮೊಟೇರಾ ಸ್ಟೇಡಿಯಂನಲ್ಲಿ ಅಂತಿಮ ಎರಡು ಪಂದ್ಯಗಳ ಆಯೋಜನೆ ಮಾಡಲಾಗಿದ್ದು ಮೊದಲ ಪಂದ್ಯ ಈಗಾಲೇ ಅಂತ್ಯವಾಗಿದೆ.

ಐದು ಪಂದ್ಯಗಳ ಟಿ20 ಸರಣಿ ಅಂತ್ಯವಾಗುತ್ತಿದ್ದಂತೆಯೇ ಬಾರತ ಹಾಗೂ ಇಂಗ್ಲೆಂಡ್ ತಂಡಗಳು ಪುಣೆಗೆ ಹಾರಬೇಕಾಗಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳಾಂತರ ಮಾಡಲು ಇರುವ ಅವಕಾಶಗಳನ್ನು ಎದುರು ನೋಡುತ್ತಿದೆ ಎನ್ನಲಾಗಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...