ಪುನೀತ್ ಅಂತಿಮ ದರ್ಶನ ಪಡೆದಿದ್ದ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

Date:

ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಂತ ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರದಂದು ಆಗಮಿಸಿ, ತೆಲುಗು ನಟ ನಂದಮೂರಿ ಬಾಲಕೃಷ್ಣ ( Actor Nandamuri Balakrishna ) ಆಗಮಿಸಿ, ಪಡೆದಿದ್ದರು.

ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರು ಹಲವು ದಿನಗಳಿಂದ ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಇಂದು ಹೈದರಾಬಾದಿನ ಬಂಜಾರ ಹಿಲ್ಸ್ ನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅಂದಹಾಗೇ ದಿನಾಂಕ 29-10-2021ರಂದು ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರ ಆಗಮಿಸಿ, ಕಂಠೀರವ ಕ್ರೀಢಾಂಗಣದಲ್ಲಿ ವಿಕ್ಟರಿ ವೆಂಕಟೇಶ್, ಹಾಲಿ ಹಾಗೂ ನಂದಮೂರಿ ಬಾಲಕೃಷ್ಣ ಅವರು ಪಡೆದಿದ್ದರು. ಅಲ್ಲದೇ ಪುನೀತ್ ರಾಜ್ ಕುಟುಂಬಸ್ಥರಿಗೆ, ನಟ ಶಿವರಾಜ್ ಕುಮಾರ್ ಗೆ ಸಾಂತ್ವಾನ ಹೇಳಿದ್ದರು.

ಈ ವೇಳೆ ಮಾತನಾಡಿದ್ದಂತ ಅವರು, ನಾವು ಒಂದೇ ಕುಟುಂಬದಲ್ಲಿ ಹುಟ್ಟಿರದೇ ಇದ್ದರೂ, ಸಹೋದರರಿದ್ದಂತೆ. ಹಲವು ಬಾರಿ ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಭೇಟಿಯಾಗಿದ್ದೇನೆ. ಪುನೀತ್ ಇಲ್ಲವೆನ್ನುವುದನ್ನು ನಂಬಲು ಆಗ್ತಾ ಇಲ್ಲ ಎಂದಿದ್ದರು. ಇಂತಹ ಅವರು ಇಂದು ಭುಜದ ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...