ಪುನೀತ್ ರಾಜ್ಕುಮಾರ್ ತೀರಿಕೊಂಡ ನಂತರ ಸ್ಯಾಂಡಲ್ವುಡ್ನ ಬಹುತೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು ಅಂತಿಮ ದರ್ಶನ ಪಡೆದಿದ್ದರು. ಆದರೆ, ಪುನೀತ್ ಜೊತೆ ಎರಡು ಸಿನಿಮಾದಲ್ಲಿ ಕೆಲಸ ಮಾಡಿದ್ದ ರಾಧಿಕ ಪಂಡಿತ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಪೋಸ್ಟ್ ಕೂಡ ಹಾಕಿರಲಿಲ್ಲ.
ಪುನೀತ್ ನಿಧನ ಹೊಂದಿ 13 ದಿನಗಳಾದ ನಂತರ ಇವತ್ತು ಬೆಳಿಗ್ಗೆ ಅವರ ಜತೆ ಇರುವ ಫೋಟೋವನ್ನು ರಾಧಿಕಾ ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ಗೆ ಸಾಕಷ್ಟು ಜನರು ‘ನೀವು ಅಪ್ಪು ಸರ್ಅನ್ನು ಕೊನೆಯ ಬಾರಿಗೆ ನೋಡೋಕೆ ಯಾಕೆ ಬರಲಿಲ್ಲ. ತುಂಬಾ ಬೇಸರ ಆಯಿತು’ ಅಂತೆಲ್ಲ ಕಮೆಂಟ್ ಹಾಕಿದ್ದರು. ಇದು ರಾಧಿಕಾಗೆ ಬೇಸರ ಮೂಡಿಸಿದೆ. ಇದಕ್ಕೆ ಅವರು ಉತ್ತರವನ್ನು ನೀಡಿದ್ದಾರೆ.
ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ.
ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ ಎಂದು ಬರೆದುಕೊಂಡಿದ್ದಾರೆ.