ಪುನೀತ್ ನೋಡಿಕೊಳ್ಳುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತುಕೊಂಡ ವಿಶಾಲ್

1
26

ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸಿನಿಮಾ ಲೋಕದ ಸ್ನೇಹಿತರು ಗೆಳೆಯನ ಸ್ಮರಿಸಿದ್ದಾರೆ.

ಪುನೀತ್ ಅಕಾಲಿಕ ಮರಣದ ನೋವನ್ನು ಅನಿವಾರ್ಯವಾಗಿ ಅರಗಿಸಿಕೊಳ್ಳಬೇಕಾಗಿದೆ.

ಪುನೀತ್ ರಾಜ್ ಕುಮಾರ್ ಸುಮಾರು 1800 ಮಕ್ಕಳ (Children)ವಿದ್ಯಾಭ್ಯಾಸದ (Education)ಹೊಣೆ ಹೊತ್ತಿದ್ದರು.

ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ (Actor Vishal) ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ. ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಸಿನಿಮಾದಲ್ಲಿ ನಾಯಕರಾಗಿರುವ ಜತೆ ಪುನೀತ್ ನಿಜಜೀವನದಲ್ಲಿಯೂ ನಾಯಕರಾಗಿ ಕೆಲಸ ಮಾಡಿಕೊಂಡು ಬಂದವರು. ಅನಾಥರು, ಮಾರಕ ರೋಗಗಳಿಂದ ಬಳಲುತ್ತಿರುವವರ ಸಹಾಯಕ್ಕೆ ಧಾವಿಸುತ್ತಿದ್ದರು. ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.

ಪವರ್ ಸ್ಟಾರ್ ಎಂದು ಜನರಿಂದ ಕರೆಸಿಕೊಳ್ಳುವ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಡೀ ಕರ್ನಾಟಕ ಸೇರಿ ಎಲ್ಲ ಚಿತ್ರರಂಗಗಳು ಕಂಬನಿ ಮಿಡಿದಿದ್ದವು. ಭಾನುವಾರ ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತ್ತು.

 

 

 

1 COMMENT

LEAVE A REPLY

Please enter your comment!
Please enter your name here