ಪುನೀತ್ ಬೋರ್ಡ್ ಕೆಡವಿದವ ಕಂಬಿ ಹಿಂದೆ!

Date:

ನಟ ಪುನೀತ್ (Puneeth Rajkumar) ಹೆಸರಿಟ್ಟಿದ್ದ ಬಡಾವಣೆ ನಾಮ ಫಲಕ ಜೆಸಿಬಿಯಿಂದ (JCB) ಧ್ವಂಸ ಮಾಡಲಾಗಿದ್ದು, ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ (Kolar) ಜಿಲ್ಲೆ ಬಂಗಾರಪೇಟೆ (Bangarapete) ತಾಲೂಕಿನ ದೇಶಿಹಳ್ಳಿ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ.

ಬಡಾವಣೆ ನಿವಾಸಿಗಳು ಕೆಸರನಹಳ್ಳಿ ಪಂಚಾಯತಿಗೆ ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಹೆಸರು ಇಡಲು ಅನುಮತಿ ಕೋರಿದ್ದರು. ಪಂಚಾಯತಿ ಅಧಿಕಾರಿಗಳ ಮೌಖಿಕ ಒಪ್ಪಿಗೆ ಹಾಗೂ ಆಶ್ವಾಸನೆ ಮೇರೆಗೆ ನಾಮಫಲಕ ಅಳವಡಿಸಿದ್ದರು. ಆದರೆ ಇದೀಗ ಏಕಾ ಏಕಿ ತೆರವು ಮಾಡಲಾಗಿದೆ.

ಬಡಾವಣೆ ನಿವಾಸಿಗಳು ರಾತ್ರಿಯೇ ನಾಮಫಲಕವನ್ನು ತೆರವು ಮಾಡದಂತೆ ಪ್ರತಿರೋಧ ಮಾಡಿದರು. ಆದರೂ ಪ್ರತಿರೋದ ಗಮನಕ್ಕೆ ತೆಗೆದುಕೊಳ್ಳದೆ ತೆರವು ಮಾಡಲಾಗುತಿತ್ತು. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂದ ಬಂಗಾರಪೇಟೆ (Bangarapete Police) ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಜೆಸಿಬಿ (JCB) ಹಾಗೂ ಚಾಲಕನನ್ನು ವಶಕ್ಕೆ ಪಡೆದು ದೂರು ದಾಖಲು ಮಾಡಿದ್ದಾರೆ. ಬಡಾವಣೆ ನಿವಾಸಿಗಳು ಬಡಾವಣೆಗೆ ಮತ್ತೆ ಪುನೀತ್ ​ ಹೆಸರು ಇಡಲು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...