ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ.
ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ನಿನ್ನೆ ನೆಚ್ಚಿನ ನಟನ ಅಗಲಿಕೆಯ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದರು. ಅದೇ ದುಃಖದಲ್ಲೇ ಮಲಗಿದ್ದ ಅಭಿಮಾನಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ದುಖಃ ಭರಿಸುವಂತಹ ಶಕ್ತಿ ನೀಡಲಿ ಎಂದು ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
ಪುನೀತ್ ಸಾವಿನ ಸುದ್ದಿ ಬಹಿರಂಗ ವಾದಾಗಿನಿಂದ ಇಂದು ಬೆಳಿಗ್ಗೆವರೆಗೂ 3ಮಂದಿ ಅಪ್ಪು ಅಭಿಮಾನಿಗಳು ಸಾವಿಗೀಡಾಗಿದ್ದರು. ಇದೀಗ ಜ್ಞಾನಮೂರ್ತಿ ತಮ್ಮಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದು ಪುನೀತ್ ಸಾವಿನ ಸುದ್ದಿ ಕೇಳಿ ಸಾವಿಗೀಡಾಗಿರುವ ಪುನೀತ್ ಅಭಿಮಾನಿಗಳ ಸಂಖ್ಯೆ ನಾಲ್ಕಕ್ಕೇರಿದೆ.