ಪೂಜೆ ವಿಚಾರಕ್ಕೆ ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ !

Date:

ಪೂಜೆ ವಿಚಾರಕ್ಕೆ ಪೂಜಾರಿಗಳಿಂದ ತ್ರಿಶೂಲ ಹಿಡಿದು ಬಡಿದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಚಿಕ್ಕಲ್ಲೂರು ದೇವಾಲಯದಲ್ಲಿ
ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ.

ಗಾಯಾಳುಗಳನ್ನು ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ (65), ಶಿವಕುಮಾರ ಸ್ವಾಮಿ (40) ಹಾಗೂ ನಂಜುಂಡ ಸ್ವಾಮಿ (32) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುತ್ತಿತ್ತು. ಈ ಸಮಯದಲ್ಲಿ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ ಎಂದು ತಡೆ ಒಡ್ಡಿದ್ದಾರೆ. ಹೀಗಾಗಿ ನಂಜುಂಡಸ್ವಾಮಿ ಮತ್ತು ಶಂಕರಪ್ಪನ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...