ಪೆಟ್ರೋಲ್ ಡೀಸೆಲ್ ಆಯ್ತು ಈಗ ಅಡುಗೆ ಎಣ್ಣೆ ದರ ಇಳಿಕೆ!

Date:

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದೆ.

ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಕೆಜಿಗೆ 20 ರೂ.ವರೆಗೂ ದರ ಕಡಿಮೆಯಾಗಿದೆ.

ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ, ಪಾಮ್ ಆಯಿಲ್, ಸೂರ್ಯಕಾಂತಿ ಎಣ್ಣೆ ಸೇರಿದಂತೆ ಬಹುತೇಕ ಅಡುಗೆ ಎಣ್ಣೆಗಳ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆಯಾಗಿದ್ದು, ಅಡುಗೆ ಎಣ್ಣೆ ದರ 7 -20 ರೂಪಾಯಿವರೆಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಖಾದ್ಯ ತೈಲ ಬೆಲೆಗಳು ಸಾಕಷ್ಟು ಗಣನೀಯವಾಗಿ ಕುಸಿದಿವೆ. ಹಲವು ಸ್ಥಳಗಳಲ್ಲಿ 20 ರೂ., 18 ರೂ., 10 ರೂ., 7 ರೂ.ಗಳಷ್ಟು ಇಳಿಕೆಯಾಗಿದೆ. ತಾಳೆ ಎಣ್ಣೆ, ಕಡಲೆಕಾಯಿ, ಸೋಯಾಬೀನ್, ಸೂರ್ಯಕಾಂತಿ ಮತ್ತು ಎಲ್ಲಾ ಪ್ರಮುಖ ಎಣ್ಣೆಗಳ ಬೆಲೆ ಕುಸಿತ ಕಂಡಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...