ಪೆನ್‌ʼಡ್ರೈವ್‌ ಕೇಸ್: ಇಂತಹ ಸೂಕ್ಷ್ಮ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ !

1 Min Read

ಬೆಂಗಳೂರು: ಈ ಅನಾಚಾರದ ವಿಡಿಯೋವನ್ನು ಯಾರೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕಿಸಿರುವ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ” ಎಂದರು. “ಈ ಅನಾಚಾರದ ವಿಡಿಯೋವನ್ನು ಯಾರೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಹಾಸನದಲ್ಲಿ ಎಲ್ಲರಿಗೂ ಹಂಚಿಕೆಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ನಂತರ ಯಾವುದೂ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಇಂತಹ ಸೂಕ್ಷ್ಮ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ. ಅವರು ಯಾವ ವಿಚಾರಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಯಾವ ಸಾಧನೆ ಮಾಡಿದ್ದಾರೆ ಎಂದು ಪ್ರತಿಭಟನೆಗೆ ರಾಜ್ಯದಾದ್ಯಂತ ಕರೆ ಕೊಟ್ಟಿದ್ದಾರೆಂದು ತಿಳಿದಿಲ್ಲ. ಈ ವಿಚಾರ ಬೇರೆ ದಿಕ್ಕಿಗೆ ಹೋಗಲಿ ಎಂದು ಅವರು ಬಯಸಿದ್ದಾರೆ” ಎಂದು ಸಚಿವರು ಆರೋಪಿಸಿದರು.

Share This Article