ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !

0
42

ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇನ್ನೂ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ.
ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.