ಪೆನ್ ಡ್ರೈವ್ ಪ್ರಕರಣ: ಬರೀ ರಾಜಕೀಯ ಮಾಡುತ್ತಿದ್ದಾರೆ: ಅಣ್ಣಮಲೈ

Date:

ಬೆಂಗಳೂರು: ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು.
ಬಳಿಕ ರೆಡ್ ಕಾರ್ನರ್ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದರು.
ದೇಶದ ಪೊಲೀಸ್ ಇತಿಹಾಸದಲ್ಲೇ ಇಂಟರ್ಪೋಲ್ ಮೂಲಕ ಆರೋಪಿಯನ್ನು ಬಂದಿಸಿ ಕರೆತಂದಿದ್ದು ಕರ್ನಾಟಕ ಪೊಲೀಸ್. 2015ರಲ್ಲಿ ಡಿಜಿಪಿ ಪ್ರತಾಪ್ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಾರೆ. ಇದು ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ....

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಅಯೋಧ್ಯೆ: ಅಯೋಧ್ಯೆಯ ಭವ್ಯ...

ಚಳಿಗಾಲದಲ್ಲಿ ದೊಡ್ಡಪತ್ರೆ ಎಲೆಗಳ ಸೇವನೆಯಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ..?

ಚಳಿಗಾಲದಲ್ಲಿ ದೊಡ್ಡಪತ್ರೆ ಎಲೆಗಳ ಸೇವನೆಯಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ..? ಪ್ರಕೃತಿಯಲ್ಲಿ ನಮ್ಮ ಆರೋಗ್ಯಕ್ಕೆ...

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 10 ಕಡೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 10 ಕಡೆ ಲೋಕಾಯುಕ್ತ ದಾಳಿ ಬೆಂಗಳೂರು: ರಾಜ್ಯದಲ್ಲಿ...