ಹಾಸನ: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರೀತಂಗೌಡ ಆಪ್ತರಿಗೆ 14 ದಿನ ನ್ಯಾಯಾಂಗ ಬಂಧನ ನೀಡಿದ ಈ ಡೇ ಕೋರ್ಟ್ ಆದೇಶ ಹೊರಡಿಸಿದೆ. ಲಿಖಿತ್ಗೌಡ ಹಾಗೂ ಚೇತನ್ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್ಜ್ ಆದೇಶಿಸಿದ್ದಾರೆ.
ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾಗಿರುವ ಲಿಖಿತ್ಗೌಡ ಮತ್ತು ಚೇತನ್ ಅವರ ಮೇಲೆ ಏಪ್ರಿಲ್ 23ರಂದು ಹಾಸನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹಸ್ತಾಂತರ ಮಾಡಿಕೊಂಡು SIT ಪೊಲೀಸರು ತನಿಖೆ ನಡೆಸುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ ಲಿಖಿತ್ಗೌಡ, ಚೇತನ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ, ಸ್ಥಳ ಮಹಜರು ನಂತರ ಜಡ್ಜ್ ಮುಂದೆ ಹಾಜರುಪಡಿಸಿದ್ದರು
ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
Date:






