ಪೇರಳೆ ಹಣ್ಣಿನಲ್ಲಿ ಯತೇಚ್ಛವಾಗಿ ವಿಟಮಿನ್ ಸಿ ಇರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು
ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಶಕ್ತಿ ಸೀಬೆಕಾಯಿಗೆ ಇದೆ. ಇದರಲ್ಲಿರುವ ಆಂಟಿ ಬ್ಯಾಕ್ಟೀರಿಯಲ್ ಗುಣವೂ ಜೀರ್ಣಾಶಯವನ್ನು ಆರೋಗ್ಯದಿಂದಿಡುತ್ತದೆ.
ಪೇರಳೆಯನ್ನು ತಿನ್ನುವುದರಿಂದ ದೇಹದಲ್ಲಿ ಪೊಟಾಶಿಯಂ, ಸೋಡಿಯಂ ಸಮತೋಲನದಲ್ಲಿ ಇರುತ್ತದೆ. ಅಧಿಕ ರಕ್ತದೊತ್ತಡ, ಕೆಟ್ಟ ಕೊಲೆಸ್ಟ್ರಾಲ್ ತಗ್ಗುತ್ತದೆ.
ಸೀಬೆಯಲ್ಲಿನ ಆಂಟಿ ಆಕ್ಸಿಡೆಂಟ್ ಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಪ್ರತಿದಿನ ಒಂದು ಸೀಬೆ ತಿಂದರೆ ಚರ್ಮವೂ ಆರೋಗ್ಯವಾಗಿರುತ್ತದೆ. ಸುಕ್ಕು ಬೀಳುವುದು ಇಲ್ಲವಾಗುತ್ತದೆ.
ವಿಟಮಿನ್ ಎ ಕೂಡ ಇದರಲ್ಲಿ ಹೆಚ್ಚಿರುವುದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.
ಬಾಯಿಯಲ್ಲಿನ ಅಲ್ಸರ್, ಹುಣ್ಣುಗಳಂತಹ ಅನಾರೋಗ್ಯಗಳನ್ನು ದೂರ ಇಡುವಲ್ಲಿ ಸೀಬೆ ಸಹಕಾರಿ. ಹಲ್ಲುಗಳ ನಡುವೆ ಕಾಡುವ ಇನ್ಫೆಕ್ಷನ್ ಅನ್ನು ಪರಿಹರಿಸುತ್ತದೆ.