ಸರ್ಕಾರಿ ಸಭೆ- ಸಮಾರಂಭಗಳಲ್ಲಿ ಹೂಗುಚ್ಚ, ಹಾರ- ತುರಾಯಿ ಅಂತಾ ಅನಗತ್ಯ ಖರ್ಚು ವೆಚ್ಚ ಮಾಡುವುದನ್ನು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಈಗ ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ.
ಪೊಲೀಸರು ನೀಡುವ ಗೌರವ ವಂದನೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ನೀಡಬಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಮಂಗಳೂರಿನಲ್ಲಿ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಪರಿಶೀಲನೆ ಸಭೆಗೆಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ, ವಿಮಾನ ನಿಲ್ದಾಣದಲ್ಲಿ ಮಾಡಿದ್ದ ಗಾರ್ಡ್ ಆಫ್ ಹಾನರ್ ವ್ಯವಸ್ಥೆಗೆ ಕಸಿವಿಸಿಗೊಂಡಿದ್ದಾರೆ.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿದು ತಕ್ಷಣ ಮಂಗಳೂರು ಪೊಲೀಸ್ ಕಮೀಷನರ್ ಎನ್, ಶಶಿಕುಮಾರ್‌ಗೆ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಗಾರ್ಡ್ ಆಫ್ ಹಾನರ್ ವ್ಯವಸ್ಥೆ ಮಾಡಬಾರದು ಅಂತಾ ಸೂಚನೆ ನೀಡಿದರು.