No menu items!
2.3 C
Munich
Wednesday, September 23, 2026

ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ: ಪ್ರಲ್ಹಾದ್ ಜೋಶಿ

Must read

ಹುಬ್ಬಳ್ಳಿ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್ಸ್ಪಕ್ಟರ್ ಮತ್ತು ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಮಾಥನಾಡಿದ ಅವರು, ನೇಹಾ ಹಿರೇಮಠ ಪ್ರಕರಣದಲ್ಲಿ ಸಿದ್ದರಾಮಯ್ಯರವರು ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಏಕೆ? ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡಿತ್ತಿದ್ದಿರಿ.
ನಿಮ್ಮ ಈ ತುಷ್ಟೀಕರಣ ರಾಜಕೀಯ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪ ಸಂಖ್ಯಾತರು ಗಲಭೆ ಮಾಡಿದರೆ ಯಾಕೆ ಖಂಡನೆ ಮಾಡೋದಿಲ್ಲ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದಾಗಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಪೊಲೀಸರು ಠಾಣೆ ಬಿಟ್ಟು ಓಡಿಹೋಗತ್ತಾರೆ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article