ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Date:

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನ ಕಡ್ಡಾಯ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ (DG & IGP) ಡಾ. ಎಂ.ಎ. ಸಲೀಂ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ತಮ್ಮ ವಿಶೇಷ ದಿನಗಳಲ್ಲಿ ಕುಟುಂಬದವರೊಂದಿಗೆ ಸಮಯ ಕಳೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಒತ್ತಡದ ಕೆಲಸದ ನಡುವೆ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನದ ಸಮತೋಲನ ಕಾಪಾಡಿಕೊಳ್ಳಲು ಈ ರಜೆ ಸಹಕಾರಿಯಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಂಬಂಧ, ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನ ಕಡ್ಡಾಯ ರಜೆ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಒಳಾಡಳಿತ ಇಲಾಖೆ ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕೃತ ಪತ್ರ ಬರೆದಿತ್ತು. ಈ ಪತ್ರವನ್ನು ಪರಿಶೀಲಿಸಿದ ಡಿಜಿ ಡಾ. ಎಂ.ಎ. ಸಲೀಂ ಅವರು, ರಜೆ ನೀಡಲು ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ಮಹತ್ವದ ನಿರ್ಧಾರಕ್ಕೆ ಚಾಲನೆ ಸಿಕ್ಕಿದೆ.

ಮುಖ್ಯವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಹಾಗೂ ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI) ಸೇರಿದಂತೆ ಈ ಶ್ರೇಣಿಯ ಅಧಿಕಾರಿಗಳಿಗೆ ಈ ರಜೆ ಸೌಲಭ್ಯ ಅನ್ವಯವಾಗಲಿದೆ.

Share post:

Subscribe

spot_imgspot_img

Popular

More like this
Related

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್? ಬೆಂಗಳೂರು: ಇಂಧನ ಸಚಿವ...

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ...