ಪೋಕ್ಸೋ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ: ಶಿಕ್ಷಕನಿಗೆ ತಪ್ಪದ ಸಂಕಷ್ಟ!

Date:

ಪೋಕ್ಸೋ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ: ಶಿಕ್ಷಕನಿಗೆ ತಪ್ಪದ ಸಂಕಷ್ಟ!

ಕೋಲಾರ:- ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಮೊಬೈಲ್​ನಲ್ಲಿ ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿ ಇಟ್ಟುಕೊಂಡಿದ್ದ ಹಾಗೂ ವಿದ್ಯಾರ್ಥನಿಯರಿಗೆ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಮೊಬೈಲ್​ನಲ್ಲಿ ಸುಮಾರು 5000 ನಗ್ನ ವಿಡಿಯೋಗಳು ಪತ್ತೆಯಾಗಿದ್ದವು.

ವಿದ್ಯಾರ್ಥಿಗಳಿಂದ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಸಲಾಗಿತ್ತು. ಆದರೆ, ತನಿಖೆ ವೇಳೆ ಭಯನಾಕ ಸತ್ಯ ಹೊರಬಂದಿತ್ತು. ತನಿಖೆ ಸಂದರ್ಭ ಶಿಕ್ಷಕ ಮುನಿಯಪ್ಪನ 4 ಮೊಬೈಲ್​ಗಳನ್ನು ಸೀಜ್ ಮಾಡಲಾಗಿತ್ತು. ಮೊಬೈಲ್​ ಪರಿಶೀಲನೆ ಮಾಡಿದಾಗ ಹೆಣ್ಣುಮಕ್ಕಳ ನಗ್ನ ವಿಡಿಯೋ‌, ಫೋಟೋಗಳು ಪತ್ತೆಯಾಗಿದ್ದವು. ಹೀಗಾಗಿ ಶಿಕ್ಷಕನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...