ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Date:

ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

 

ಬೆಂಗಳೂರು: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...