ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ತೆರೆ!

Date:

ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಇಂದು ರಾತ್ರಿ ತೆರೆ ಬೀಳಲಿದೆ. ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ, ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಸಮಾರೋಪ ಸಮಾರಂಭ ಆರಂಭವಾಗಲಿದೆ.

ಸ್ಟೇಟ್ ಡಿ ಫ್ರಾನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಕಾಣಿಸಿಕೊಳ್ಳಲಿದ್ದಾರೆ.

ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿ ಹಾಕಿ ತಂಡದ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಹಾಗೂ ಶೂಟರ್ ಮನು ಭಾಕರ್ ಕಾಣಿಸಿಕೊಳ್ಳಲಿದ್ದಾರೆ.

ಸಮಾರಂಭದಲ್ಲಿ “ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್‌ಗಳು, ನೃತ್ಯಗಾರರು ಮತ್ತು ಸರ್ಕಸ್ ಕಲಾವಿದರು” ಭಾಗವಹಿಸಲಿದ್ದಾರೆ ಎಂದು ಸಂಘಟಕರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಶನಿವಾರದ ಪಂದ್ಯಗಳೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಈ ಬಾರಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿರುವುದು ಭಾರತದ ಸರ್ವಶ್ರೇಷ್ಠ ಸಾಧನೆ. ಹಾಗೆಯೇ ಶೂಟಿಂಗ್​ನಲ್ಲಿ ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಒಟ್ಟು 6 ಪದಕಗಳೊಂದಿಗೆ ಭಾರತ ತಂಡವು ಪ್ಯಾರಿಸ್ ಒಲಿಂಪಿಕ್ಸ್ ಅಭಿಯಾನವನ್ನು ಅಂತ್ಯಗೊಳಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...