No menu items!
23.4 C
Munich
Saturday, May 2, 2026

ಪ್ಯಾಲೆಸ್ಟೈನ್ ಧ್ವಜ ಹಾರಾಡಿಸಿದ ಬಾಲಕರು: ಗಲಭೆಗೆ ಸಂಚು ಶಂಕೆ!?

Must read

ಪ್ಯಾಲೆಸ್ಟೈನ್ ಧ್ವಜ ಹಾರಾಡಿಸಿದ ಬಾಲಕರು: ಗಲಭೆಗೆ ಸಂಚು ಶಂಕೆ!?

ಚಿಕ್ಕಮಗಳೂರು:- ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿರುವ ಘಟನೆ ನಗರದ ಪ್ರಮುಖ ರಸ್ತೆಗಳಲ್ಲಿ ಜರುಗಿದೆ.

ಸದ್ಯ ಈ ಘಟನೆ ಸಂಬಂಧ ಇದೀಗ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಾಲಕರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌ ನೀಡಿ ನಗರದಾದ್ಯಂತ ಓಡಾಟ ನಡೆಸಲು ಸೂಚನೆ ನೀಡಲಾಗಿತ್ತಾ? ಇಂದು ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನಕ್ಕೆ ಪ್ಲಾನ್ ಮಾಡಲಾಗಿತ್ತಾ? ಎಂಬ ಅಂಶಗಳ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ಸ್ಪೆಕ್ಟರ್ ಗವಿರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article